ration card application:- ಸ್ನೇಹಿತರ ಈ ಲೇಖನಿಯ ಮೂಲಕ ನಾವು ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕುವುದು ಬೇಕಾಗುವ ದಾಖಲಾತಿಗಳು ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇನ್ನು ಎಷ್ಟು ದಿನ ಕಾಲಾವಕಾಶ ಇದೆ ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಒಂದು ಲೇಖನೆಯನ್ನು ಕೊನೆಯವರೆಗೂ ಓದಲು ಪ್ರಯತ್ನ ಮಾಡಿ ಮತ್ತು ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ಅಂತ ಲಿಂಕ್ ಕೂಡ ಈ ಒಂದು ಲೇಖನಿಯ ಮೂಲಕ ನೀಡಿದ್ದೇವೆ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ನಮ್ಮ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೆ ತರುವ ವಿವಿಧ ಸರ್ಕಾರಿ ಯೋಜನೆಗಳು ಹಾಗೂ ನಮ್ಮ ರಾಜ್ಯ ಸರ್ಕಾರ ನೇಮಕಾತಿ ಮಾಡಿಕೊಳ್ಳುವ ಸರ್ಕಾರಿ ಹುದ್ದೆಗಳ ಮಾಹಿತಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಮತ್ತು ಗೃಹಲಕ್ಷ್ಮಿ ಯೋಜನೆ ಹಾಗೂ ರೇಷನ್ ಕಾರ್ಡ್ ಗಳಿಗೆ ಸಂಬಂಧಿಸಿದ ಮಾಹಿತಿ ಈ ರೀತಿ ಪ್ರತಿಯೊಂದು ಮಾಹಿತಿಯನ್ನು ತಕ್ಷಣ ಹಾಗೂ ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಹೊಸ ರೇಷನ್ ಕಾರ್ಡ್ (ration card application) ಅರ್ಜಿ ಪ್ರಾರಂಭ..?
ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ನವಂಬರ್ 3ನೇ ತಾರೀಕಿನಿಂದ ನವಂಬರ್ 9 ನೇ ತಾರೀಖಿನವರೆಗೆ ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವವರು ಹಾಗೂ ಅರ್ಹ ಕುಟುಂಬಗಳು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕೆಲವೊಂದು ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಅವುಗಳ ವಿವರ ಹಾಗೂ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ
ಹೌದು ಸ್ನೇಹಿತರೆ, ಇದೇ ನವಂಬರ್ 3-9 ನೇ ತಾರೀಖಿನವರೆಗೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 6:00 ವರೆಗೆ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ನಮ್ಮ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಆದ್ದರಿಂದ ಈ ಒಂದು ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಿ. ಮತ್ತು ಈ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಈ ಶ್ರಮ ಕಾರ್ಡ್ ಬೇಕಾಗುತ್ತದೆ ಆದ್ದರಿಂದ ಈ ಶ್ರಮ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು (ration card application) ಬೇಕಾಗುವ ದಾಖಲಾತಿಗಳು..?
- ಈ ಶ್ರಮ ಕಾರ್ಡ್
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
ಹೌದು ಸ್ನೇಹಿತರೆ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ರಾಜ್ಯ ಸರ್ಕಾರ ಈ ಶ್ರಮ ಕಾರ್ಡ್ ಇದ್ದವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಅದರಿಂದ ಈ ಶ್ರಮ ಕಾರ್ಡ್ ಬಗ್ಗೆ ಮಾಹಿತಿ ತಿಳಿಯಲು ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದು
ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ (ration card application)..?
ಸ್ನೇಹಿತರೆ ನೀವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನಿಮಗೆ ಹತ್ತಿರವಿರುವ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಹಾಗೂ ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಬಳಿ ಕಂಪ್ಯೂಟರ್ ಅಥವಾ ಲ್ಯಾಪ್ಟಾಪ್ ಇದ್ದರೆ ಹಾಗೂ ಮೊಬೈಲ್ ಮೂಲಕ ಕೂಡ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರ ಮೇಲೆ ನೀಡಿದಂತ ಲಿಂಕನ್ನು ಬಳಸಿಕೊಂಡು ನೀವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು! ಆದರೆ ಕೆಲವೊಂದು ಸಂದರ್ಭಗಳಲ್ಲಿ ಸರ್ವರ್ ಬಿಜಿ ಇರುವುದರಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ ಹಾಗಾಗಿ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಮತ್ತು ಇದೇ ರೀತಿ ರೇಷನ್ ಕಾರ್ಡ್ಗೆ ಸಂಬಂಧಿಸಿದ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು